*ಬೆಳಗಾವಿಯಲ್ಲಿ ಮಹಿಳೆಗೆ ಥಳಿಸಿ ಸಾರ್ವಜನಿಕವಾಗಿ ಬಟ್ಟೆ ಹರಿದ ಪ್ರಕರಣ: ಡಿಸಿಪಿ ರೋಹನ್ ಜಗದೀಶ್ ಭೇಟಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ವಡ್ಡರವಾಡಿಯಲ್ಲಿ ಮಹಿಳೆಗೆ ಥಳಿಸಿ ಸಾರ್ವಜನಿಕವಾಗಿ ಬಟ್ಟೆ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ರೋಹನ್ ಜಗದೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವೇಶ್ಯಾವಾಟಿಕೆ ಆರೋಪದಲ್ಲಿ ನೆರೆಮನೆಯವರೇ ಮಹಿಳೆ ಹಾಗೂ ಆಕೆಯ ಮಗಳನ್ನು ಹೊರಗೆಳೆದು ತಂದು ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಹೋದರೆ ಪೊಲೀಸರು ಕೂಡ ದೂರು ತೆಗೆದುಕೊಳ್ಳಲು ಹಿಂದೇಟುಗಾಕಿದ್ದಲ್ಲದೇ ನೀವೇ ಬಗೆಹರಿಸಿಕೊಳ್ಳಿ ಎಂದು ಕಳುಹಿಸಿದ್ದಾರೆ ಎನ್ನಲಾಗಿದೆ.
ವೇಶ್ಯಾವಾಟಿಕೆ ಆರೋಪದಲ್ಲಿ ತಾಯಿ-ಮಗಳ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿಸಿಪಿ ರೋಹನ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಅವರು ಹೆದರುವ ಅಗತ್ಯವಿಲ್ಲ. ಸೂಕ್ತ ರಕ್ಷಣೆ ನೀಡಲಾಗುವುದು ಎಂದರು.
ಇನ್ನು ಪೊಲೀಸ್ ಸಿಬ್ಬಂದಿ ದೂರು ತೆಗೆದುಕೊಂಡಿಲ್ಲ ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿಯಿಂದ ತಪ್ಪಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ