Belagavi NewsBelgaum NewsKarnataka News
*ಬೆಳಗಾವಿಯಲ್ಲಿ ಮಹಿಳೆ ಹತ್ಯೆ: ಓರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.
ಬೆಳಗಾವಿಯ ಗಣೇಶಪುರದಲ್ಲಿ ಲಕ್ಷ್ಮೀನಗರದಲ್ಲಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಅಂಜನಾ ಎಂಬ ಮಹಿಳೆಯನ್ನು ಕೊಲೆಗೈದು ಮಾಂಗಲ್ಯಸರ, ಉಂಗುರ, ಓಲೆಗಳನ್ನು ದೋಚಿ ಪರಾರಿಯಾಗಿದ್ದಾರೆ.
ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆದಿದೆ.



