ಪ್ರಗತಿವಾಹಿನಿ ಸುದ್ದಿ; ಗೋಕಾಕ: ಯಮಕನಮರಡಿ ಕ್ಷೇತ್ರದ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಕ್ಸಿಜನ್ ಕಿಟ್ ವಿತರಿಸಿ, ಕೊರೋನಾ ಜಾಗೃತಿ ಮೂಡಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರ ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ 25% ರಷ್ಟು ಅನುದಾನ ಮೀಸಲಿಟ್ಟಿದೆ. ಜನರ ತುರ್ತು ಸೇವೆಗಾಗಿ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ಎರಡ್ಮೂರು ದಿನಗಳಲ್ಲಿ ಜನತೆ ಸೇವೆಗಾಗಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಸಾವಿರಾರೂ ರೋಗಿಗಳಿಗೆ ಅನುಕೂಲವಾಗಲಿದೆ. ಇಲ್ಲಿನ ಜನ ಸೂಕ್ಷ್ಮತೆಯನ್ನು ಕಾಪಾಡಿಕೊಂಡರೇ ಯಮಕನಮರಡಿ ಕ್ಷೇತ್ರದಲ್ಲಿ ಆದಷ್ಟೂ ಬೇಗ ಕೊರೋನಾಗೆ ಮುಕ್ತಿ ನೀಡಬಹುದು ಎಂದರು.
ಜಿಲ್ಲೆಯ ಎಲ್ಲಾ ಶಾಸಕರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಿಟ್ ನೀಡಿದರೆ ರೋಗಿಗಳಿಗೆ, ವೈದ್ಯರಿಗೆ ಅನುಕೂಲವಾಗಿಲಿದೆ. ಶಾಸಕರು, ಕ್ಷೇತ್ರಗಳಿಗೆ ಈ ಯೋಜನೆ ಕಲ್ಪಿಸಲು ಮುಂದಾಗಲಿ ಎಂದು ಮನವಿ ಮಾಡಿಕೊಂಡರು.
ಹುಕ್ಕೇರಿ ತಾಲೂಕ ವೈದ್ಯಾಧಿಕಾರಿ ಡಾ. ಉದಯ ಕುಡಚಿ ಮಾತನಾಡಿ, ಸತೀಶ ಜಾರಕಿಹೊಳಿ ಅವರು ಆಕ್ಸಿಜನ್ ನೀಡುತ್ತಿರುವುದು ಹೆಮ್ಮೆಯ ವಿಷಯ, ರೋಗಿಗಳಿಗೆ ಒಳಿತಾ ಗಲಿದೆ. ಕ್ಷೇತ್ರದಲ್ಲಿ ಹಗಲಿರುಳು ಕೊರೋನಾ ಜಾಗೃತಿ ಮೂಡಿಸಿದ್ದಾರೆ. ಲಕ್ಷಾಂತರ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ್ದಾರೆ. ವೈದ್ಯರ ಜತೆ ಶಾಸಕರು ಕೈ ಜೋಡಿಸಿದ್ದರಿಂದ ನಮಗೆ ಆನೆ ಬಲ ಬಂದತಾಗಿದೆ ಎಂದರು.
ಈ ಸಂದರ್ಭದಲ್ಲಿ ಡಾ. ರವಿ ಅಂಟಿನ್ , ವಿವೇಕ ಜತ್ತಿ, ಮಾರುತಿ ಗುಟಗುದ್ದಿ, ಪಾಂಡು ರಂಗ ಶುಭೆ, ಹುಕ್ಕೇರಿ ತಾಲೂಕಿನ ವೈದ್ಯಾಧಿಕಾರಿಗಳು ಹಾಗೂ ಇತರರು ಇದ್ದರು.
ಕೊರೊನಾ ಬಗ್ಗೆ ಕೋಡಿಮಠದ ಶ್ರೀಗಳಿಂದ ಭಯಂಕರ ಭವಿಷ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ