Belagavi NewsBelgaum NewsKarnataka NewsLatestPolitics

*ಯರಗಟ್ಟಿ ತಾಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ: ಯರಗಟ್ಟಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸಾರ್ವಜನಿಕರ ಬಹುದಿನಗಳ ಕನಸಾಗಿದ್ದ, “ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ” (ಪ್ರಜಾಸೌಧ) ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಶನಿವಾರ ನೆರವೇರಿತು.

Home add -Advt

​ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.

ಸುಮಾರು 8.60 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ.

ತಾಲೂಕಾ ಪಂಚಾಯತ್ ಕಾರ್ಯಾಲಯವನ್ನು ಸಹ ಇದೇ ವೇಳೆ ಉದ್ಘಾಟಿಸಲಾಯಿತು.

ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕರಾದ ವಿಶ್ವಾಸ ವಸಂತ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನೆರವೇರಿತು.

ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button