
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಸಂತಬಸ್ತವಾಡ ಗ್ರಾಮದಲ್ಲಿ ನಡೆದಿದ್ದು ಆಕೆಯ ಜೊತೆ ಸ್ನೇಹ ಹೊಂದಿದ್ದ ಸದ್ರುದ್ದೀನ್ ಭೇಪಾರಿ ಎಂಬ ಯುವಕನೇ ವಿದ್ಯಾರ್ಥಿನಿಯನ್ನು ಅಪಹರಿಸಿದ್ದಾನೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಸದ್ರುದ್ದೀನ್ ಬೇಪಾರಿ ಎಂಬ ಯುವಕ ಮತ್ತು ನರ್ಸಿಂಗ್ ಓದುತ್ತಿದ್ದ ಯುವತಿ ನಡುವೆ ಮೂರು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಆದರೆ ಇದಕ್ಕೆ ಮನೆಯವರು ಸಮ್ಮತಿಸಿರಲಿಲ್ಲ. ಮನೆಯಲ್ಲಿ ಇವರ ಸಂಗತಿ ತಿಳಿದಿದ್ದೇ ಹುಡುಗಿ ತಾಯಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನು ಆಕ್ಷೇಪಿಸಿದ ಬಳಿಕ ಇವರಿಬ್ಬರೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಗಾರೆ ಕೆಲಸ ಮಾಡುತ್ತಿದ್ದ ಸದ್ರುದಿನ್ ಬೇಪಾರಿ ತನ್ನ ಮಗಳನ್ನು ಅಪಹರಿಸಿದ್ದಾನೆಂದು ಯುವತಿಯ ಕುಟುಂಬಸ್ಥರು ದೂರು ನೀಡಿದ್ದಾರೆ. ಯುವಕನ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ