Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ನಡುರಸ್ತೆಯಲ್ಲಿಯೇ ಯುವಕನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವಕನೊಬ್ಬನನ್ನು ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಿವಬಸವನಗರದಲ್ಲಿ ನಡೆದಿದೆ.

ಯುವಕನನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ನಡುರಸ್ತೆಯಲ್ಲಿಯೇ ಹತ್ಯೆಗೈದಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. 26 ವರ್ಷದ ನಾಗರಾಜ್ ಗಾಡಿವಡ್ಡರ್ ಮೃತ ಯುವಕ.

Home add -Advt

ತಡರಾತ್ರಿ ಶಿವಬಸವನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಯುವಕನ ತಲೆಗೆ ಹಿಂದಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ದುಷ್ಕರ್ಮಿಗಳು ಒಬ್ಬೊಬ್ಬರು ಒಂದೊಂದು ದಿಕ್ಕಿಗೆ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಡಿಸಿಪಿ ಶೇಖರ್, ಎ ಸಿಪಿ ಕಟ್ಟಿಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button