ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುಗಾದಿ ಹಬ್ಬವನ್ನು ಇನ್ನುಮುಂದೆ “ಧಾರ್ಮಿಕ ದಿನವನ್ನಾಗಿ” ಆಚರಿಸುವ ಬಗ್ಗೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಸುತ್ತೋಲೆಯನ್ವಯ ಬೆಳಗಾವಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಹೆಚ್ಚಿನ ಭಕ್ತರೊಂದಿಗೆ, ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳು, ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ರಾಜ್ಯ ಧಾರ್ಮಿಕ ದಿನಾಚರಣೆಯನ್ನು ಆಚರಿಸಲು ಸೂಚಿಸಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಶ್ರೀ ವಿರುಪಾಕ್ಷಅಂಗ ಸಮಾಧಿ ಮಠದಲ್ಲಿ ಪ.ಪೂ. ಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಪ.ಪೂ. ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಸಿದ್ದಗಿರಿ ಮಠ, ಕನ್ಹೇರಿ ಕೊಲ್ಲಾಪುರ ರವರ ದಿವ್ಯ ಸಾನಿಧ್ಯದಲ್ಲಿ ಮುಜರಾಯಿ ಹಜ್, ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಯುಗಾದಿ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ಬೆಳಗ್ಗೆ 6-00 ಗಂಟೆಯಿಂದ 9-00 ಗಂಟೆಯವರೆಗೆ ವಿವಿಧ ವಿನೂತನ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಸಲು ಕೋರಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ