Karnataka News

*2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಬಸ್ ಗಳ ಖರೀದಿಗೆ ಕ್ರಮ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು, ಬರುವ ಮಾರ್ಚ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವರಾದ ಸಂತೋಷ್ ಲಾಡ್ ಅವರು ಹೇಳಿದರು.


ಈಗಾಗಲೇ‌ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್ ವಿ ಸಂಕನೂರ ಅವರ ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.


ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು
ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button