
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳವಡಿ ಮಲ್ಲಮ್ಮನ ಉತ್ಸವದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಜ್ಯೋತಿಯಾತ್ರೆಯನ್ನು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇಂದು ಸಂಭ್ರಮದಿಂದ ಸ್ವಾಗತಿಸಲಾಯಿತು.
ಬೆಳಗಾವಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಉದಯಕುಮಾರ್ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ