ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಈ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ರಾಜ್ಯದ ಒಂದಿಂಚೂ ಜಾಗವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಉದ್ಧವ್ ಠಾಕ್ರೆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಕನ್ನಡ ನಾಡಿನ ನೆಲ, ಜಲ ಮತ್ತು ಭಾಷೆಯ ರಕ್ಷಣೆಗೆ ನಾವು ಕಟಿಬದ್ಧರಾಗಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿ ನಡೆದುಕೊಂಡರೆ ಪ್ರತ್ಯುತ್ತರ ನೀಡಲು ನಾವು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಮಹಾರಾಷ್ಟ್ರದ ಸರ್ಕಾರ ಗಡಿ ಜಿಲ್ಲೆಯ ಜನರಲ್ಲಿ ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ತನ್ನ ವೈಫಲ್ಯ ಮರೆ ಮಾಚಲು ಜನರ ಭಾವನೆ ಕೆರಳಿಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ