Politics

*ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಸತೀಶ್ ಸೈಲ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಹಾಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ನೀಡಿದ್ದ 7 ವರ್ಷಗಳ ಕಠಿಣ ಜೈಲುಶಿಕ್ಷೆಯ ಆದೇಶವನ್ನು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ಧ ಪೀಠ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಿದೆ.

ಅಲ್ಲದೇ ಅಪರಾಧಿಗಳಿಗೆ ವಿಧಿಸಿದ್ದ ದಂಡದ ಮೊತ್ತದಲ್ಲಿ ಶೇ.25ರಷ್ಟು 6 ವಾರಗಳಲ್ಲಿ ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಹಗೂ ಇತರ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ನಾಳೆ ಸತೀಶ್ ಸೈಲ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

Home add -Advt

Related Articles

Back to top button