ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ
ಪ್ರಗತಿವಾಹಿನಿ ಸುದ್ದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರು ಆರೋಪಿಗಳು ದೋಷಿಗಳೆಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ತೀರ್ಪು ಹೊರಬೀಳುತ್ತಿದ್ದಂತೆ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ದೋಷಿಯಾಗಿದ್ದು, ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿ, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿದೆ.
ಬೇಲೆಕೇರಿಯಿಂದ ಅದಿರು ನಾಪತ್ತೆ ಮಾಡಿದ ಬರೋಬ್ಬರಿ 6 ಕೇಸ್ ಗಳಲ್ಲಿಯೂ ಶಾಸಕ ಸತೀಶ್ ಸೈನ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚಿಸಿದ್ದು, ಶಿಕ್ಷೆ ಪ್ರಮಾಣವನ್ನು ಅ.25ಕ್ಕೆ ಕಾಯ್ದಿರಿಸಿದೆ.
ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ