

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿದ್ದರು.
ಪ್ರತಿಯೊಂದು ಮಳಿಗೆಗೆ ಭೇಟಿ ನೀಡಿ ಮಾಹಿತಿ ಪಡೆದ ರೋಷನ್, ಮಾದರಿ ಪ್ರದರ್ಶನ ಆಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಕಾರ್ತೀಕ ಎಂ. ಸಹ ಆಗಮಿಸಿ ಎಲ್ಲ ಮಳಿಗೆಗಳನ್ನು ವೀಕ್ಷಿಸಿದರು.
ವಾಣಿಜ್ಯೋದ್ಯಮ ಸಂಘದ ಪರವಾಗಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರನ್ನು ಸನ್ಮಾನಿಸಲಾಯಿತು.



