ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ
ಜಾನುವಾರಗಳ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಲಸಿಕೆಯನ್ನು ಜಾನುವಾರುಗಳಿಗೆ ಹಾಕಿಸುವಲ್ಲಿ ರೈತ ಸಮುದಾಯ ಸಹಕಾರ ನೀಡಿ ಲಸಿಕಾ ಕಾರ್ಯಕ್ರಮವನ್ನು ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾದರಿಯಲ್ಲಿಯೇ ಯಶಸ್ವಿಗೊಳಿಸಬೇಕೆಂದು ಶಾಸಕ ಉಮೇಶ ಕತ್ತಿ ಹೇಳಿದರು.
ಅವರು ಪಟ್ಟಣದಲ್ಲಿ ಪಶು ಸಂಗೋಪನಾ ಇಲಾಖೆಯ ಆಶ್ರಯದಲ್ಲಿ ಜರುಗಿದ ಜಾನುವಾರುಗಳಿಗೆ ೧೫ನೇ ಸುತ್ತಿನ ಲಸಿಕಾ ಯೋಜನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ರೈತ ಸಮುದಾಯದಿಂದ ಕೂಡಿರುವುದರಿಂದ ಜಾನುವಾರು ಗಳ ಸಂಖ್ಯೆ ಹೆಚ್ಚಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕಾಗಿದೆ. ಕಾರಣ ಪಶು ಇಲಾಖೆಯ ಸಿಬ್ಬಂದಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಲ್ಲಿ ಪ್ರಯತ್ನಿಸಬೇಕೆಂದರು.
ಪಶು ಸಂಗೋಪನೆ ಸಹಾಯಕ ನಿರ್ದೇಶಕ ಡಾ ಎಮ್ ಬಿ ಪಾಟೀಲ ಮಾತನಾಡಿ, ಇಲಾಖೆಯವರು ಜಾನುವಾರುಗಳಿಗೆ ಲಸಿಕೆ ಹಾಕುವುದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ರೈತರ ಮನೆಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತಿದೆ. ಲಸಿಕಾ ಕಾರ್ಯಕ್ರಮನ್ನು ಯಶಸ್ವಿಗೊಳಿಸಬೇಕೆಂದು ರೈತರಲ್ಲಿ ಮನವಿ ಮಾಡಿಕೊಂಡರು.
ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿ ಘಟಕಾಧ್ಯಕ್ಷ ಪರಗೌಡ ಪಾಟೀಲ, ಪುರಸಭೆ ಸದಸ್ಯ ರಾಜು ಮುನ್ನೋಳಿ, ಶಿವನಗೌಡ ಪಾಟೀಲ, ಬಸಗೌಡ ಪಾಟೀಲ, ಮುನಿರ ಕಳಾವಂತ, ತಹಶಿಲ್ದಾರ ರೇಷ್ಮಾ ತಾಳಿಕೋಟಿ , ಪಶುಪರೀಕ್ಷಕ ಎಸ್.ಎಮ್ ನಾಯಿಕ, ಹೆಚ್ ಟಿ ದೇಸಾಯಿ ಮತ್ತಿತರರು ಉಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ