
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರಿ ಮುಂದಿನ ಎರಡು ದಿನಗಳ ಕಾಲ ಬಿಸಿ ಗಾಳಿ ಬೀಸಲಿದ್ದು, ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಧಿಕಾರ ಸೂಚನೆ ನೀಡಿದ್ದು, ಕರಾವಳಿಯಲ್ಲಿ ತೀವ್ರ ಬಿಸಿಗಾಳಿ ಬೀಸಲಿದೆ. ಸಾವರ್ಜನಿಕರು ಮುಂಜಾಗೃತೆವಹಿಸಬೇಕು ಎಂದು ಸೂಚಿಸಿದೆ.
ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂತ ತಾಪಮಾನ ಹೆಚ್ಚಳವಾಗಿದೆ. ಈ ನಡುವೆ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡದ ಸಾವಂತವಾಡಾದಲ್ಲಿ 41.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಮೂರೂ ಜಿಲ್ಲೆಗಳಲ್ಲಿ ಮುಂದಿನ 2 ದಿನ 39.3 ಡಿಗ್ರಿಯಿಂದ 41.3 ಡಿಗ್ರಿವರೆಗೆ ಉಷ್ಣಾಂಶ ದಾಖಲಾಗುವ ನಿರೀಕ್ಷೆ ಇದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ ಎಚ್ಚರಿಕೆ ಇಲ್ಲಿದೆ –

