ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿನ ಸಾಂಬ್ರಾ ರಸ್ತೆಯ ಗಾಂಧಿನಗರ ಸರ್ವೀಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ.
ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಮುತಗಾ ಸಾಯಿ ನಗರದ ಮೊಹ್ಮದ್ ನುರಲಿ ಎಂದು ಗುರುತಿಸಲಾಗಿದೆ.
ಬಸ್ ರಾಂಗ್ ಸೈಡ್ ನಿಂದ ಬಂದಿದ್ದು, ಬೈಕ್ ಬಸ್ ನ ಅಡಿಗೆ ನುಸುಳಿ ಹೋಗಿ ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ರಾತ್ರಿ 10 ಗಂಟೆ ಹೊತ್ತಿಗೆ ಅಪಘಾತ ಸಂಭವಿಸಿದೆ.
ಬೆಳಗಾವಿ: ಭೀಕರ ಅಪಘಾತಕ್ಕೆ ಇಬ್ಬರು ಬಲಿ
https://pragati.taskdun.com/2-death-in-accident-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ