
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ. ಕೆ. ಕಂಗ್ರಾಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಸಂಗೀತಾ ನಂದೀಶ ಪಾಟೀಲ್ (೨೪) ಆತ್ಮಹತ್ಯೆ ಮಾಡಿಕೊಂಡವರು. ಆರು ವರ್ಷಗಳ ಹಿಂದೆ ಸಂಗೀತಾ ಅವರ ವಿವಾಹ ಕಲಬುರ್ಗಿ ಮೂಲದ ನಂದೀಶ್ ಪಾಟೀಲ್ ಎಂಬುವವರ ಜೊತೆಗೆ ನೆರವೇರಿತ್ತು.
ನಂದೀಶ್ ಪಾಟೀಲ್ ಬೆಳಗಾವಿಯಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಪತ್ನಿಯೊಂದಿಗೆ ಬಿ. ಕೆ. ಕಂಗ್ರಾಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗುವೂ ಇದೆ.
ಆದರೆ ಭಾನುವಾರ ಬಿ. ಕೆ. ಕಂಗ್ರಾಳಿಯ ಮನೆಯಲ್ಲಿ ಸಂಗೀತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
ಬಾಗಲಕೋಟೆ: ಮಹಿಳೆಯ ಮೇಲೆ ಗುಂಡಿನ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ