Belagavi NewsBelgaum NewsKannada NewsKarnataka NewsNational

*ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಟ್ಟಡಕ್ಕೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದ ಯುವಕನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ ಎಂಬ ಗಂಭೀರ ಆರೋಪಿಸಲಾಗಿದೆ. 

ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿ ಶಿವು ಕಮ್ಮಾರ (22) ಮೃತ ದುರ್ದೈವಿ. ಯುವಕ ಬ್ರಹ್ಮನಗರದಲ್ಲಿರುವ ಕಟ್ಟಡಕ್ಕೆ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಬಾಗದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಬಿದ್ದ  ತಕ್ಷಣವೇ ಸ್ಥಳೀಯರು ಅವನನ್ನು ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. 

Home add -Advt

ಆದರೆ, ಆಸ್ಪತ್ರೆಗೆ ದಾಖಲಾದ ನಂತರವೂ ಯುವಕನಿಗೆ ತಕ್ಷಣ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಯಲ್ಲಿ ಏಳು ಜನ ವೈದ್ಯರು ಇದ್ದರೂ ಯಾರೂ ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಡ್ಯೂಟಿಗೆ ವೈದ್ಯರು ಗೈರಾಗಿದ್ದರಿಂದ ಗಾಯಾಳುವಿನ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತೆಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ನನ್ನ ಮಗ ಬದುಕುತ್ತಿದ್ದ ಎಂದು ಮೃತನ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. 

ಈ ಘಟನೆ ತಿಳಿದು ಸ್ಥಳೀಯರು ಆಸ್ಪತ್ರೆಗೆ ಆಗಮಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಸಂಬಂಧಪಟ್ಟ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Related Articles

Back to top button