ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಮುಂದುವರಿದಿದ್ದು, ಇನ್ನೂ ಸುಮಾರು 4 ಲಕ್ಷ ಮತಗಳ ಎಣಿಕೆ ಆಗಬೇಕಿದೆ.
ಈವರೆಗಿನ ಅಂಕಿ ಸಂಖ್ಯೆಗಳನ್ನು ಗಮನಿಸಿದರೆ ಗೋಕಾಕ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರ ಹೊರತುಪಡಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಇದು ಬಿಜೆಪಿಗೆ ದೊಡ್ಡ ಶಾಕ್ ಆಗಿದೆ.
ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ರಾಮದುರ್ಗ, ಸವದತ್ತಿ, ಬೈಲಹೊಂಗಲ ಮತ್ತು ಅರಬಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಬಿಜಪಿ ಶಾಸಕರಿರುವ ಕ್ಷೇತ್ರಗಳಲ್ಲಿ ಸಹ ಕಾಂಗ್ರೆಸ್ ಮುನ್ನಡೆ ಪಡೆದಿದೆ.
ಇನ್ನುಳಿದ ಮತಗಳ ಎಣಿಕೆ ಯಾವ ರೀತಿಯ ತಿರುವು ಪಡೆಯುತ್ತದೆ ಕಾದು ನೋಡಬೇಕಿದೆ.
ಸಧ್ಯಕ್ಕೆ ಕಾಂಗ್ರೆಸ್ 10,272 ಮತಗಳ ಮುನ್ನಡೆ ಸಾಧಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ