Latest

ಸಿಎಂ ನೋಡಲು ಬಂದ ಬಾಲಕನ ಮೇಲೆ ಹಲ್ಲೆ; ಪೊಲೀಸ್ ಪೇದೆ ಅಮಾನತಿಗೆ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ನೋಡಲೆಂದು ಬಂದ ಬಾಲಕನ ಮೇಲೆ ಹಲ್ಲೆ ನದೆಸಿದ್ದ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಒತ್ತಾಯಗಳು ಕೇಳಿಬಂದಿವೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರಿಗೆ ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನೋಡಲು ಬಂದಿದ್ದ ಬಾಲಕ ನಿತೀಶ್ ಎಂಬಾತನ ಮೇಲೆ ಪೊಲೀಸ್ ಪೇದೆ ಅಮಾನುಷವಾಗಿ ಹಲ್ಲೆ ಮಾಡಿದ್ದರು. ಇದು ಮಕ್ಕಳ ಹಕ್ಕು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಹಲ್ಲೆ ನಡೆಸಿದ ಪೊಲೀಸ್ ಪೇದೆಯನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ರಾಜ್ಯಪಾಲರು, ಡಿಜಿ, ಐಜಿಪಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ವಕೀಲರು, ಸಾಮಾಜಿಕ ಕಾರ್ಯಕರ್ತರು ಹಾಗೂ ಕೆಪಿಸಿಸಿ ಕಾನೂನು ವಿಭಾಗದ ಕಾರ್ಯದರ್ಶಿ ಭೀಮನಗೌಡ. ಜಿ. ಪರಗೊಂಡ ದೂರು ನೀಡಿದ್ದಾರೆ.

Home add -Advt

ಬಾಲಕನ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಪೇದೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
​ ಶಾಸಕರ ಅನುದಾನದ ಚೆಕ್ ಹಸ್ತಾಂತರ

Related Articles

Back to top button