ಬೆಳಗಾವಿ: ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ: 80 ವಿದ್ಯಾರ್ಥಿನಿಯರು ಸೇರಿ 90 ಜನರಲ್ಲಿ ಸೋಂಕು ದೃಢ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಿತ್ತೂರಿನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ ಸಂಭವಿದೆ. ಶಾಲಯ ಸಿಬ್ಬಂದಿ ಸೇರಿ 90 ಜನರಲ್ಲಿ ಕೊರೋನಾ ದೃಢಪಟ್ಟಿದೆ.
2 ದಿನಗಳ ಹಿಂದೆ ಶಾಲೆಯ 12 ವಿದ್ಯಾರ್ಥಿನಿಯರಿಗೆ ಕೊರೋನಾ ದೃಢಪಟ್ಟಿತ್ತು. ಆದರೆ ಇದೀಗ ಈ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಜೊತೆಗೆ 10 ಸಿಬ್ಬಂದಿಯಲ್ಲೂ ಸೋಂಕು ಪತ್ತೆಯಾಗಿದೆ.
15ರಿಂದ 18ರ ವಯೋಮಾನದ ವಿದ್ಯಾರ್ಥಿನಿಯರು ಇಲ್ಲಿದ್ದು, ಇವರಿಗೆ ವ್ಯಾಕ್ಸಿನೇಶನ್ ಕೂಡ ಆಗಿಲ್ಲ.
ಶಾಲೆಯ ನೂರಾರಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿದ್ದರೂ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದ್ದರಿಂದಾಗಿ ಈಗ ಮಹಾ ಎಡವಟ್ಟು ಆಗಿದ್ದು, ಅಲ್ಲಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿನಿಯರಲ್ಲೂ ಆತಂಕ ಮನೆ ಮಾಡಿದೆ.
ಇಲ್ಲಿ ಹೊರರಾಜ್ಯದ ವಿದ್ಯಾರ್ಥಿಯನಿಯರೂ ವ್ಯಾಸಂಗ ಮಾಡುತ್ತಿದ್ದು, ಅವರನ್ನೆಲ್ಲ ಶಾಲೆ, ಹಾಸ್ಟೆಲ್ ಗಳನ್ನು ಸೀಲ್ ಡೌನ್ ಮಾಡಿ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೂ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ