Belagavi NewsBelgaum NewsCrimeKannada NewsKarnataka News

*ಬೆಳಗಾವಿ: ಕುರಿ ಕಾಯುತ್ತಿದ್ದ ಯುವಕನ ಮೇಲೆ ಮೊಸಳೆ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜುಂಜೂರವಾಡ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಯುವಕನ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ನಡೆದಿದೆ.

ಜುಂಜೂರವಾಡ ಗ್ರಾಮದ ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಹಿಂಭಾಗದಲ್ಲಿ ಕುರಿ ಕಾಯುತ್ತಿದ್ದ ವೇಳೆ ಸುನಿಲ್ ಮಾಳಪ್ಪ ಗೊಸರಾಳ (ಶಿರಟ್ಟಿ) (28) ಎಂಬ ಯುವಕ ಕೈ ತೊಳೆದುಕೊಳ್ಳಲು ನೀರಿನ ಬಳಿ ತೆರಳಿದ್ದಾನೆ. ಈ ವೇಳೆ ಏಕಾಏಕಿ ಮೊಸಳೆ ದಾಳಿ ನಡೆಸಿದ್ದು, ಸುನಿಲ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿದೆ.

Home add -Advt

ಸ್ಥಳೀಯರು ತಕ್ಷಣವೇ ಧಾವಿಸಿ ಯುವಕನನ್ನು ಮೊಸಳೆಯ ದಾಳಿಯಿಂದ ರಕ್ಷಿಸಿದ್ದು, ಬಳಿಕ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ಕುರಿತು ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಈ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Related Articles

Back to top button