ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶನಿವಾರ(ಮಾ.19) ಕಾಗವಾಡ ತಾಲ್ಲೂಕಿನ ಮೋಳವಾಡಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ.
ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ದಿಸೆಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಗ್ರಾಮವಾಸ್ತವ್ಯ ಮಾಡಲಿದ್ದಾರೆ.
ಅದೇ ರೀತಿ ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು ಮತ್ತು ತಾಲ್ಲೂಕುಗಳ ತಹಶೀಲ್ದಾರರು ಕೂಡ ಅಂದು ತಮ್ಮ ವ್ಯಾಪ್ತಿಯ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವರು.
.
ಅಂದು ಬೆಳಗ್ಗೆ ಗ್ರಾಮಕ್ಕೆ ತೆರಳಲಿರುವ ಜಿಲ್ಲಾಧಿಕಾರಿಗಳು, ಗ್ರಾಮದಲ್ಲಿರುವ ಶಾಲೆ, ಗ್ರಾಮ ಪಂಚಾಯಿತಿ, ಅಂಗನವಾಡಿ ಸೇರಿದಂತೆ ಎಲ್ಲ ಸರಕಾರಿ ಸಂಸ್ಥೆಗಳಿಗೆ ಭೇಟಿ ನೀಡುತ್ತಾರೆ.
ಇದಲ್ಲದೇ ಮನೆ ಮನೆಗೆ ತೆರಳಿ ಗ್ರಾಮದ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಹಾಗೂ ಇತರೆ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳು ಮತ್ತು ಮಂಜೂರಾತಿ ಆದೇಶಗಳನ್ನು ವಿತರಿಸಲಿದ್ದಾರೆ.
ಇದಕ್ಕೂ ಮುಂಚೆ ಬೈಲಹೊಂಗಲ ತಾಲ್ಲೂಕಿನ ಬೈಲವಾಡ, ಕಿತ್ತೂರು ತಾಲ್ಲೂಕಿನ ವೀರಾಪುರ ಹಾಗೂ ನಿಪ್ಪಾಣಿ ತಾಲ್ಲೂಕಿನ ಹಂಚಿನಾಳ ಕೆ.ಎಸ್. ಗ್ರಾಮಗಳಲ್ಲಿ ಜಿಲ್ಲಾಧಿಕಾರಿ ಹಿರೇಮಠ ಅವರು ವಾಸ್ತವ್ಯ ಮಾಡಿದ್ದರು.
ಬುಧವಾರ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿಗೆ ಸರಕಾರಿ ನೌಕರರ ಸಂಘದ ಸನ್ಮಾನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ