
ನೀರು ಸರಬರಾಜು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರದಲ್ಲಿ ನೀರು ಪೂರೈಕೆ ಸಿಬ್ಬಂದಿ ಸೋಮವಾರದಿಂದ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾಡುಲ ನೂರಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಮಹಾನಗರ ಪಾಲಿಕೆ ಮುಂದಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಕಾರ್ಯನಿರ್ವಹಿಸಲು ನೂರಕ್ಕೂ ಅಧಿಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ ತಿಳಿಸಿದ್ದಾರೆ.
ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ನಿರ್ದೇಶನದಂತೆ ನೀರು ಸರಬರಾಜು ಸಿಬ್ಬಂದಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದರೆ ನೇಮಕಾತಿಯ ರೀತಿ, ನೀತಿಗಳ ಕುರಿತು ಯಾವುದೇ ಮಾಹಿತಿ ನೀಡಲಾಗಿಲ್ಲ.
ಗಮನಿಸಿ: ನಾಳೆಯಿಂದ ಬೆಳಗಾವಿ ನಗರಕ್ಕೆ ನೀರು ಪೂರೈಕೆ ಇಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ