Belagavi NewsBelgaum NewsKannada NewsKarnataka NewsNationalPolitics
*ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಶೇಖರ್ ಈಟಿ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.
ಅವರ ಅಗಲಿಕೆ ನಮಗೆಲ್ಲ ನೋವು ತಂದಿದೆ. ಒಬ್ಬ ಪ್ರಾಮಾಣಿಕ, ನಿಷ್ಟಾ ವಂತ ಹಿರಿಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ. ಪಕ್ಷದ ಪರವಾಗಿ ಅವರ ಕುಟುಂಬಕ್ಕೆ ಆದ ದುಃಖ ತುಂಬುವ ಶಕ್ತಿ ಭಗವಂತ ನೀಡಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಸದಾಶಿವ ನಗರದ ರುಧ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಅವರು ತಿಳಿಸಿದ್ದಾರೆ.