https://youtu.be/1fIk_8Gr7u0
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –: ಬೆಳಗಾವಿ ಜಿಲ್ಲೆಯಲ್ಲಿ ಇಂದು ಗುರುವಾರ(ಮೇ 7) ಮತ್ತೆ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಒಂದು ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 74 ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಮೇ 7) ಪ್ರಕಟಣೆಯ ಪ್ರಕಾರ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯಲ್ಲಿ ಒಂದು ಪ್ರಕರಣ ದೃಢಪಟ್ಟಿರುತ್ತದೆ.
13 ವರ್ಷದ ಬಾಲಕಿ(ಪಿ-700) ಗೆ ಸೋಂಕು ತಗುಲಿರುತ್ತದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 74 ಪ್ರಕರಣಗಳು ದೃಢಪಟ್ಟಿದ್ದು, 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಒಬ್ಬರು ಮೃತಪಟ್ಟಿರುತ್ತಾರೆ.
ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-೧೯ ಸೋಂಕು ತಗುಲಿದ್ದವರ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರೇಬಾಗೇವಾಡಿಯ ಪಿ-284 ಮತ್ತು ಕುಡಚಿಯ ಪಿ-300 ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 74 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ