Belagavi NewsBelgaum NewsKannada NewsKarnataka NewsLatest
*ಮಾ.25ರಂದು ಬೆಳಗಾವಿ ವಿಭಾಗ ಮಟ್ಟದ ಪಾಲುದಾರರ ಸಮಾಲೋಚನಾ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಬೆಳಗಾವಿ ವಿಭಾಗ ಮಟ್ಟದ ಪಾಲುದಾರರ ಸಮಾಲೋಚನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಮಾರ್ಚ್ 25, 2026 ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಬೆಳವಾಡಿ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೈಗಾರಿಕೆ ನೀತಿ ಕುರಿತು ಚರ್ಚೆ ನಡೆಯಲಿದ್ದು, ಉದ್ಯಮಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತದೆ. ಕೈಗಾರಿಕಾ ನೀತಿಗಳ ಬಗ್ಗೆ ಸಂವಾದ ನಡೆಯಲಿದೆ.
ಈ ಸಮಾಲೋಚನಾ ಕಾರ್ಯಕ್ರಮದಲ್ಲಿ ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು, ಉದ್ಯಮಿಗಳು ಮತ್ತು ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಂಬಂಧಪಟ್ಟ ಎಲ್ಲಾ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.




