ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಹುತಾತ್ಮ ದಿನಾಚರಣೆ ಕಾಯ್ರಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದ ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ರಾತ್ರೋರಾತ್ರಿ ಹೊರಡಿಸಿರುವ ಈ ಆದೇಶದಿಂದ ಎಂಇಎಸ್ ವಿಚಲಿತವಾಗುವಂತಾಗಿದೆ.
ಕರ್ನಾಟಕದ ಗಡಿಯಲ್ಲಿರುವ ಸುಮಾರು 865 ಗ್ರಾಮಗಳು ಹಾಗೂ ಬೆಳಗಾವಿ ನಗರ ಸೇರಿದಂತೆ 5 ನಗರ ಹಾಗೂ ಪಟ್ಟಣಗಳನ್ನುಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಕುರಿತು ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರಕಾರವನ್ನು ಪ್ರತಿವಾದಿಯಾಗಿಸಿಕೊಂಡು ಅರ್ಜಿ ಸಲ್ಲಿಸಿದ್ದು ಇದು ವಿಚಾರಣೆ ಹಂತದಲ್ಲಿದೆ.
ಈ ಹಿಂದೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋದ ಬಸ್ ಗಳ ಮೇಲೆ ಮಸಿಯಿಂದ ‘ಜೈ ಮಹಾರಾಷ್ಟ್ರ’ ಎಂದು ಬರೆದ ಕಾರಣ ಬೆಳಗಾವಿ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಅಹಿತಕರ ಘಟನೆ ನಡೆಯಲು ಅವಕಾಶ ನೀಡದಂತೆ ಆಗ್ರಹಿಸಿ ರಸ್ತೆ ತಡೆ, ಪ್ರತಿಭಟನೆ ನಡೆಸಿವೆ. ಬೆಳಗಾವಿಯಲ್ಲಿ ಮಹಾರಾಷ್ಟ್ರದ ಸಚಿವರಿಗೆ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರವೇಶಿಸಲು ಬಿಟ್ಟಲ್ಲಿ ಅಹಿತಕರ ಘಟನೆಗಳು ನಡೆಯುವುದಾಗಿ ಸಹ ಕನ್ನಡ ಪರ ಸಂಘಟನೆಗಳು ಹಲವು ಬಾರಿ ಮನವಿ ಮಾಡಿಕೊಂಡಿವೆ.
ಮಹಾರಾಷ್ಟ್ರದ ಸಚಿವರು, ಸಂಸದರು ಬಳಗಾವಿ ಪ್ರವೇಶಿಸುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದು ವಾಹನಗಳನ್ನು ಜಖಂಗೊಳಿಸಲಾಗಿದೆ. ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.
ಹೀಗಿರುವಾಗ ಸಂಸದ ಧೈರ್ಯಶೀಲ ಮಾನೆಯವರು ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಚೋದನಕಾರಿ ಭಾಷಣ ಮಾಡುವುದರಿಂದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಒದಗುವ ಸಾಧ್ಯತೆ ಇರುವುದರಿಂದ ಅವರ ಪ್ರವೇಶ ನಿಷೇಧಿಸಿರುವುದಾಗಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶದಲ್ಲಿ ತಿಳಿಸಿದ್ದಾರೆ.
ನಾನಾ ರೀತಿಯ ನೆಪಗಳಲ್ಲಿ ಗಡಿ ವಿವಾದ ಕೆದಕುವ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಈ ಆದೇಶದಿಂದಾಗಿ ಬಿಸಿ ಮುಟ್ಟಿದಂತಾಗಿದೆ. ಹುತಾತ್ಮ ಚೌಕದಲ್ಲಿ ಹುತಾತ್ಮ ದಿನಾಚರಣೆ ಹೆಸರಿನಲ್ಲಿ ಗಡಿ ವಿವಾದ ಕೆದಕುವ ಕಾರ್ಯಕ್ರಮ ನಡೆಸಲು ಮುಂದಾದ ಎಂಇಎಸ್ ಗೆ ಇದರಿಂದ ತಕ್ಕ ಶಾಸ್ತಿಯಾಗಿದೆ.
ಯುವಕನ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ನಾಲ್ವರು ಯುವತಿಯರು!
https://pragati.taskdun.com/four-young-women-sexually-assaulted-a-young-man/
*ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ ನಿಧನ*
https://pragati.taskdun.com/ex-mla-l-timmappa-hegadeno-moresagara/
4 ಕಡೆಯಿಂದ ಬಿಜೆಪಿ ರಥಯಾತ್ರೆ – ಬೊಮ್ಮಾಯಿ ಮಾಹಿತಿ
https://pragati.taskdun.com/bjp-rathayatra-from-4-places/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ