
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಂಗಳೂರಿನಲ್ಲಿ ಜ.20ರಂದು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ನೂರಾರು ರೈತರು ತೆರಳಿದ್ದಾರೆ.

ಭಾರತ ದೇಶ ರೈತರ ದೇಶ. ರೈತರ ಮೇಲೆಯೇ ಅವಲಂಬಿಸಿರುವ ದೇಶ. ರೈತರನ್ನು ಕಡೆಗಣಿಸಿದರೆ ದೇಶಕ್ಕೆ ಉಳಿಗಾಲವಿಲ್ಲ. ಕಾಂಗ್ರೆಸ್ ಪಕ್ಷ ಸದಾ ರೈತರ ಪರವಾಗಿಯೇ ನಿಲ್ಲುತ್ತದೆ. ರೈತರಿಗಾಗಿಯೇ ಹೋರಾಡುತ್ತದೆ. ಆದರೆ ಕೇಂದ್ರದ ಬಿಜೆಪಿ ಸರಕಾರ ರೈತವಿರೋಧಿ ಕಾಯ್ದೆ ಜಾರಿಗೊಳಿಸಿದೆ. ಅದರ ವಿರುದ್ಧ ಬುಧವಾರ ಕಾಂಗ್ರೆಸ್ ಪಕ್ಷ ರಾಜಭವನ ಚಲೋ ಹಮ್ಮಿಕೊಂಡಿದ್ದು, ಬೆಳಗಾವಿಯಿಂದ ನೂರಾರು ರೈತರು ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.



ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ