

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ಆಗಿ ಟೇಪ್ ಮ್ಯಾನಿಪೆಕ್ಚರ್ ಮಾಡುವ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡು, ಕಾರ್ಖಾನೆಯಲ್ಲಿ ಸಂಪೂರ್ಣ ಬೆಂಕಿ ಆವರಿಸಿಕೊಂಡಿದೆ
ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯಲ್ಲಿ ಬೆಂಕಿ ಹತ್ತಿಕೊಂಡಿದ್ದು, ಹಲವಾರು ಕಾರ್ಮಿಕರು ಸುಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಕಾರ್ಖಾನೆಗೆ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಇನ್ನೂ ಒಳಗಡೆ ಹಲವು ಜನ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ