ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಎಂಟು ಮಾದರಿಗಳ ಪೈಕಿ ಐದು ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ೨೧ ಮಾದರಿಗಳ ಪೈಕಿ ಇದೀಗ ಒಟ್ಟಾರೆ ೧೮ ನೆಗೆಟಿವ್ ಬಂದಿರುತ್ತವೆ. ಇನ್ನೂ 3 ವರದಿ ಬರಬೇಕಿದೆ.
ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ