*ಬೆಳಗಾವಿಯ ಕಾಡಂಚಿನ ಗ್ರಾಮಗಳ ಸಮಸ್ಯೆ: ಬೆಂಗಳೂರಲ್ಲಿ ಮಹತ್ವದ ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆ ಆಗ್ತಿದೆ. ಈ ಮಧ್ಯೆ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮಗಳ ಜನರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳ ಜನರ ನೆರವಿಗೆ ಪರಿಷತ್ ಸದಸ್ಯ ನಾಗರಾಜ್ ಯಾದವ್ ಸಮಸ್ಯೆ ಪರಿಹರಿಸುವ ದಾವಿಸಿದ್ದಾರೆ.
ಅಲ್ಲಿನ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲದೆಂಬಂತೆ ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಮನವರಿಕೆ ಮಾಡುವ ಜೊತೆಗೆ ಮಹತ್ವದ ಸಭೆ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇಂದು ಬೆಂಗಳೂರಲ್ಲಿ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಪರಿಷತ್ ಸದಸ್ಯ ನಾಗರಾಜ್ ಯಾದವ್, ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಕೆಲ ದಿನಗಳ ಹಿಂದೆ ಖಾನಾಪುರ ತಾಲೂಕಿನ ಆಮಗಾಂವ್ ಗ್ರಾಮದ ಅನಾರೋಗ್ಯಕ್ಕೀಡಾದ ಮಹಿಳೆಯನ್ನು ಚೆಟ್ಟದ ಮೇಲೆ 6 ಕಿಮೀ ಸಾಗಿಸಲಾಗಿತ್ತು. ಈ ಸಮಸ್ಯೆಯನ್ನು ಕೆಲ ದೃಶ್ಯಮಾದ್ಯಮಗಳು ವಿಡಿಯೋ ಸಮೇತ ವರದಿ ಭಿತ್ತರಿಸಿದ್ದವು. ವರದಿ ಗಮನಿಸಿದ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸಚಿವದ್ವರ ಗಮನ ಸಳೆಯುವಲ್ಲಿ ಯಶಸ್ವಿ ಆಗಿದ್ದಾರೆ. ಹೋಲ್ಡಾ, ಪಾಸ್ತೋಲಿ, ಚಿಕಲೆ ಹೀಗೆ 12 ಕಾಡಂಚಿನ ಗ್ರಾಮಗಳ ಜನರಿಗೆ ಪರಿಹಾರ ಕೊಟ್ಟು ಸ್ಥಳಾಂತರ ಮಾಡುವಂತೆ ಕ್ರಮವಹಿಸುವಂತೆ ಸಚಿವ ಈಶ್ವರ ಖಂಡ್ರೆಗೆ ಪರಿಷತ್ ಸದಸ್ಯ ನಾಗರಾಜ್ ಯಾದವ್ ಇದೆ ಸಭೆಯಲ್ಲಿ ಆಗ್ರಹಿಸಿದರು.
ನಾಗರಾಜ್ ಯಾದವ್ ಅವರ ಕಾಳಜಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಪ್ರತ್ಯೇಕ ಜಾಗ ನೀಡುವಂತೆಯೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡುವಂತೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಗೆ ಮನವಿ ಮಾಡಿದರು. ಸಚಿವ ಸತೀಶ್ ಜಾರಕಿಹೊಳಿ ಕೂಡ ಯಾದವ್ ಅವರಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ