Karnataka News

*ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹಾಸನದ ನರಸೀಪುರ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ.

Home add -Advt

ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ಮಕ್ಕಳು ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ದೀಕ್ಷೀತ್ (12), ನಿತ್ಯಶ್ರೀ (10) ಹಾಗೂ ಕುಸುಮಾ ಮೃತ ಮಕ್ಕಳು. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಹಳೆಬೀಡು ಪೊಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button