Latest

ನಾಳೆಯಿಂದ ಖಾಸಗಿ ವಾಹನಗಳ ವ್ಯವಸ್ಥೆಗೆ ಸರ್ಕಾರ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ನಾಳೆಯಿಂದ ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದು, ಖಾಸಗಿ ವಾಹನಗಳ ವ್ಯವಸ್ಥೆ ಮಾಡುವುದಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸವದಿ, ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮೊದಲು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಮರಳಲಿ. ಸಾರಿಗೆ ನೌಕರರ ಬೇಡಿಕೆ ಏನೇ ಇದ್ದರೂ ಸಹಾನಿಭೂತಿಯಿಂದ ಚರ್ಚಿಸೋಣ. ಮಾತುಕತೆಗೆ ಬನ್ನಿ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಮುಷ್ಕರ ನಿಲ್ಲಿಸಿದರೆ ಮಾತುಕತೆ ನಡೆಸುವುದಾಗಿ ಸೂಚಿಸಿದ್ದಾರೆ. ಇಂದು ರತರಿ 12ಗಂಟೆಯವರೆಗೂ ನಾನು ನನ್ನ ನಿವಾಸದಲ್ಲೇ ಇರುತ್ತೇನೆ. ಸಾರಿಗೆ ನೌಕರರು ಮಾತುಕತೆಗೆ ಬರಬಹುದು. ಏನೇ ಸಮಸ್ಯೆಗಳಿದ್ದರೂ ಬಗೆಹರಿಸಲು ಪ್ರಯತ್ನಿಸುತ್ತೇವೆ. ಆದರೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಜೊತೆ ನಾನು ಚರ್ಚಿಸಲ್ಲ. ನಮ್ಮ ಇಲಾಖೆ ಸಿಬ್ಬಂದಿಗಳು ಬಂದರೆ ಅವರ ಜೊತೆ ಚರ್ಚಿಸುತ್ತೇನೆ ಎಂದು ಸವದಿ ಹೇಳಿದರು.

Home add -Advt

Related Articles

Back to top button