ಬೆಳಗಾವಿ : ಕಾಲೇಜಿನಲ್ಲಿ ಭಾಷಾ ವಿವಾದ; ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಟಿಳಕವಾಡಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗೆ ದುಷ್ಕರ್ಮಿಗಳು ಥಳಿಸಿದ್ದು, ಭಾಷಾ ವಿವಾದವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಗೋಗಟೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ಕೆಲವರು ಥಳಿಸಿದ್ದಾರೆ. ಇದರಿಂದಾಗಿ ಕಾಲೇಜಿನಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಶಿಕ್ಷಕರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಸುದ್ದಿ ತಿಳಿದ ಡಿಸಿಪಿ ರವೀಂದ್ರ ಗಡಾದಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ. ಆದರೆ ವಿದ್ಯಾರ್ಥಿಗಳು ಈ ಕುರಿತು ದೂರು ನೀಡಲು ಮುಂದಾಗಲಿಲ್ಲ.
ಕಾಲೇಜಿನ ಕಾರ್ಯಕ್ರಮದಲ್ಲಿ ಕನ್ನಡ ಹಾಡಿಗೆ ಕನ್ನಡ ಧ್ವಜ ಹಿಡಿದು ವಿದ್ಯಾರ್ಥಿ ನೃತ್ಯ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಇನ್ನೋರ್ವ ವಿದ್ಯಾರ್ಥಿ ಡಾನ್ಸ್ ಮಾಡಿದ ವಿದ್ಯಾರ್ಥಿಯನ್ನು ಥಳಿಸಿದ್ದಾನೆ ಎನ್ನುವ ಮಾಹಿತಿ ಬಂದಿತ್ತು. ಹಾಗಾಗಿ ಎಲ್ಲ ವಿದ್ಯಾರ್ಥಿಗಳನ್ನು ಕರೆಸಿ ವಿಚಾರಣೆ ನಡೆಸಲಾಗುತ್ತಿದೆ. ಕೆಲವರು ನಾಪತ್ತೆಯಾಗಿದ್ದಾರೆ. ವಿಚಾರಣೆ ಮುಂದುವರಿಸಲಾಗಿದೆ ಎಂದು ರವೀಂದ್ರ ಗಡಾದಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
20 -25 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಇಂತಹ ಘಟನೆ ಈಗ ಮತ್ತೆ ಮರುಕಳಿಸಿದ್ದು ಆತಂಕಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿ ಪ್ರವೇಶಿಸಲು ಬಿಡಬೇಡಿ; ಕರವೇ ಮನವಿ
https://pragati.taskdun.com/karnataka-rakshana-vedike-submits-memorandum-to-police-officials-urging-not-to-allow-the-entry-of-maharashtra-ministers-to-belagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ