ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಯಾವುದೇ ಕ್ಷಣದಲ್ಲಿ ಘೋಷಣೆಯಾಗಬಹುದಾದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ.
ಅಭ್ಯರ್ಥಿ ಆಯ್ಕೆಯ ಕಸರತ್ತು ಒಂದೆಡೆ ನಡೆಯುತ್ತಿದ್ದರೆ, ಇನ್ನೊಂದೆಡೆ ಗೆಲ್ಲಿಸಲು ಬೇಕಾದ ರಣತಂತ್ರಗಳನ್ನು ರೂಪಿಸುವ ಕೆಲಸ ಮತ್ತೊಂದೆಡೆ.
ಭಾರತೀಯ ಜನ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಆಯ್ಕೆಗೊಳಿಸಲು 7 ಜನ ಉಸ್ತುವಾರಿಗಳನ್ನು ನೇಮ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಸಚಿವ ಉಮೇಶ ಕತ್ತಿ, ಸಚಿವೆ ಶಶಿಕಲಾ ಜೊಲ್ಲೆ, ಮಹೇಶ ಟೆಂಗಿನಕಾಯಿ ಉಸ್ತುವಾರಿಗಳಾಗಿದ್ದಾರೆ.
ಇವರು ಅಭ್ಯರ್ಥಿ ಗೆಲ್ಲಿಸಲು ಬೇಕಾದ ತಂತ್ರಗಾರಿಕೆಯನ್ನು ಹೆಣೆಯಲಿದ್ದಾರೆ. ಒಟ್ಟಾರೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಒಂದಡಿ ಮುಂದಿಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ