Kannada NewsKarnataka NewsLatest

ಬೆಳಗಾವಿ ಅಧಿವೇಶನ: ಶನಿವಾರ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿಯಲ್ಲಿ 1924ರಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ.

1924ರಲ್ಲಿ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಮಹಾ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಈ ವರ್ಷ ಶತಮಾನೋತ್ಸವದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಈಗಾಗಲೆ ಪ್ರಮುಖರನ್ನೊಳಗೊಂಡ ಸಿದ್ಧತಾ ಸಮಿತಿ ರಚಿಸಿದೆ. ಸರಕಾರವೂ ಶತಮಾನೋತ್ಸವ ಆಚರಣೆಗೆ 3 ಕೋಟಿ ರೂ. ಮೀಸಲಿಟ್ಟಿದೆ.

ಈ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೆರಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button