ಬೆಳಗಾವಿ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ
ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ-35, ಕಾಂಗ್ರೆಸ್ ಪಕ್ಷಕ್ಕೆ 10 ಸ್ಥಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾನಗರ ಪಾಲಿಕೆಯ ಎಲ್ಲ 58 ವಾರ್ಡುಗಳ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಕ್ಷ-35, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್-10, ಎಐಎಂಐಎಂ-1 ಹಾಗೂ ಪಕ್ಷೇತರರು-12 ಸ್ಥಾನಗಳನ್ನು ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2021ರ ಮತ ಎಣಿಕೆ ಬಳಿಕ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ (ಸೆ.6) ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಚುನಾವಣಾ ಫಲಿತಾಂಶದ ಸಂಪೂರ್ಣ ವಿವರವನ್ನು ಚುನಾವಣಾ ಆಯೋಗಕ್ಕೆ ಕಳಿಸಲಾಗುವುದು. ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಈಗಾಗಲೇ ಮೀಸಲಾತಿ ಪ್ರಕಟಗೊಂಡಿರುತ್ತದೆ.
ಮೇಯರ್ ಸ್ಥಾನ ಪರಿಶಿಷ್ಟ ಜಾತಿ(ಮಹಿಳೆ) ಹಾಗೂ ಉಪ ಮೇಯರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುತ್ತದೆ.
ಮೇಯರ್ ಹಾಗೂ ಉಪ ಮೇಯರ್ ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಮಹಾನಗರ ಪಾಲಿಕೆಯ ಚುನಾವಣೆ ಹಾಗೂ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸಲು ಸಹಕರಿಸಿದ ಎಲ್ಲ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆಯನ್ನು ಅವರು ಸಲ್ಲಿಸಿದರು.
ಮಹಾನಗರ ಪಾಲಿಕೆಯ ಆಯುಕ್ತ ಡಾ.ರುದ್ರೇಶ್ ಘಾಳಿ, ಚುನಾವಣಾ ತರಬೇತುದಾರ ಆರ್.ಎಸ್.ಶಿರಗಾಂವಕರ, ಪಾಲಿಕೆಯ ಅಧಿಕಾರಿಗಳಾದ ಲಕ್ಷ್ಮೀ ನಿಪ್ಪಾಣಿಕರ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಮಹಾನಗರ ಪಾಲಿಕೆ: ಮೇಯರ್ ಸ್ಥಾನ ಸಾಮಾನ್ಯ, ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ
ಬೆಳಗಾವಿ: ಪ್ರತಿ ಅಭ್ಯರ್ಥಿ ಪಡೆದ ಮತಗಳ ವಿವರ ಇಲ್ಲಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ