Kannada NewsKarnataka News
ಬೆಳಗಾವಿ ಮಹಾನಗರ ಪಾಲಿಕೆ: ಮೇಯರ್ ಸ್ಥಾನ ಸಾಮಾನ್ಯ, ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ
ಗೊಂದಲಗಳಿಗೆ ತೆರೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಸಂಬಂಧಿಸಿದಂತೆ ಮೀಸಲಾತಿ ಪ್ತಕಟಿಸಲಾಗಿದ್ದು ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಈ ಮೊದಲು ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಎಂದು ಪ್ರಕಟಿಸಲಾಗಿತ್ತು (ಬೆಳಗಾವಿ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ). 2019ರಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಮೀಸಲಾತಿ ಪ್ರಕಟವಾಗಿತ್ತು.
ಆದರೆ ನಂತರದಲ್ಲಿ, 23 ನೇ ಅವಧಿಗೆ ಸಂಬಂಧಿಸಿದಂತೆ ಮೀಸಲಾತಿ ನಿಗದಿಪಡಿಸಿ ಫೆಬ್ರವರಿ 11, 2021 ರ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.
ಅಂತಿಮವಾಗಿ, ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಸಂಬಂಧಿಸಿದಂತೆ ಮೀಸಲಾತಿ ಪ್ತಕಟಿಸಲಾಗಿದ್ದು ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸದರಿ ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ