*ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿ ಮೂರು ನಕಲಿ ಇನ್ ಸ್ಟಾಗ್ರಾಮ್ ಖಾತೆ: ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರ ಹೆಸರಿನಲ್ಲಿ ಮೂರು ಇನ್ ಸ್ಟಾಗ್ರಾಮ್ ನಕಲಿ ಖಾತೆಗಳನ್ನು ಸೃಷ್ಟಿಸಲಾಗಿದೆ. ಈ ಕುರಿತು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿರುತ್ತದೆ. ಸದರಿ ಖಾತೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಕರ್ನಾಟಕ 50 ಸಂಭ್ರಮದ ಲಾಂಛನ ಬಿಡುಗಡೆ*