
ಸಪ್ತಪದಿ ತುಳಿದ 10 ನೇ ದಿನಕ್ಕೆ ಮಸಣ ಸೇರಿದ ನವ ದಂಪತಿ ಭೀಕರ ಅಪಘಾತದಲ್ಲಿ ಸಾವು
ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲೂಕಿನ ಹಳ್ಳೂರ ಗ್ರಾಮದ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ವಿವಾಹವಾಗಿ 10 ನೇ ದಿನಕ್ಕೆ ನವ ದಂಪತಿ ಮೃತರಾಗಿದ್ದಾರೆ.
ಮಹಾರಾಷ್ಟ್ರ ಮೂಲದ ಇಂದ್ರಜೀತ್ ಮೋಹನ ಡಮ್ಮಣಗಿ (27) ಹಾಗೂ ಕಲ್ಯಾಣಿ ಮೋಹನ ಡಮ್ಮಣಗಿ (24) ಮೃತರು. ನವ ದಂಪತಿ ಶನಿವಾರ ಕಾರಿನಲ್ಲಿ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಮರಳಿ ಮನೆಗೆ ತೆರಳುವಾಗ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಮೂಡಲಗಿ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ