ನಾಳೆ ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕಚೇರಿ ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಶಂಕರಗೌಡ ಪಾಟೀಲ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ 305 ಮತ್ತು 305ಎ ರಲ್ಲಿ ವಿಶೇಷ ಪೂಜೆಯೊಂದಿಗೆ ಅವರು ಅಧಿಕಾರ ವಹಿಸಿಕೊಳ್ಳುವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನ 12.10 ಗಂಟೆಗೆ ಪೂಜೆ ನೆರವೇರಿಸಲಿದ್ದಾರೆ.

ಹಲವಾರು ಸಚಿವರು, ಅಧಿಕಾರಿಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶಂಕರಗೌಡ ಪಾಟೀಲ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

ಶಂಕರಗೌಡ ಪಾಟೀಲ ಅವರಿಗೆ ಸಚಿವ ದರ್ಜೆ ಹುದ್ದೆ