Belagavi NewsBelgaum NewsCrimeKannada NewsKarnataka News

*ಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು 2 ಲಕ್ಷ ಮೌಲ್ಯದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂಡಲಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಬಳಿ ಕಳುವಾಗಿದ್ದ ಬೈಕ್ ಪ್ರಕರಣ ಭೇದಿಸಿದ ಮೂಡಲಗಿ ಪೊಲೀಸ್ ಠಾಣೆ ಸಿಬ್ಬಂದಿ​ ಸುಭಾಷ್ ಶಿವನಪ್ಪ ರಡ್ಡೇರಟ್ಟಿ (34) ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

Home add -Advt

ಪಿಎಸ್‌ಐ ವೈ. ಎಸ್. ಬಿಸನಾಳ ನೇತೃತ್ವದ ತನಿಖಾ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ​ಮೂಡಲಗಿ-ಮಸಗುಪ್ಪಿ ರಸ್ತೆಯ ಎಪಿಎಂಸಿ ದ್ವಾರದ ಬಳಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಯಿಂದ 2 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

​ಸದರಿ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಶ್ಲಾಘಿಸಿದ್ದಾರೆ.

Related Articles

Back to top button