Karnataka News

*ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಈಗಿನಂತೆ ಈ ಮಳೆಯು ಮುಂದಿನ 3 ಅಥವಾ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.

Home add -Advt

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಅಲ್ಲಲ್ಲಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 2ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 4 ಅಥವಾ 5ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

Related Articles

Back to top button