Belagavi NewsBelgaum NewsCrimeKannada NewsKarnataka News

*ಮಟ್ಕಾ ಆಡುತ್ತಿದ್ದ ಇಬ್ಬರನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಹಾದ್ವಾರ ರೋಡ್ ಬಳಿಯ ಸಂಬಾಜಿಗಲ್ಲಿಯಲ್ಲಿ ಇಬ್ಬರು ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಡುವಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

 ನಗರದ ಶಹಾಪೂರ ಪೊಲೀಸ್ ಠಾಣೆಯ ಪಿಎಸ್‌ಐ ಮಣಿಕಂಠ ಪೂಜಾರಿ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ ಅಸ್ಪಾಕ್ ದಾದಾಪೀರ ಸನದಿ (39) ಹಾಗೂ ಪ್ರಜ್ವಲ @ ಜ್ಯೋತಿಬಾ ಶಂಕರ ಕಿತವಾಡಕರ (28) ಎಂಬುವರನ್ನು ಬಂಧಿಸಿದ್ದಾರೆ.

Home add -Advt

ಆರೋಪಿಗಳಿಂದ 2,150 ರೂ ನಗದು ಹಾಗೂ ಅಂಕಿ ಸಂಖ್ಯೆ ಬರೆದ ಚೀಟಿಗಳನ್ನು ವಶಕ್ಕೆ ಪಡೆದು, ಅವರ ವಿರುದ್ಧ ಶಹಾಪೂರ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.127/2025 ಕಲಂ. 78(iii) ಕೆ. ಪಿ. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ. ದಾಳಿ ಕೈಗೊಂಡ ಪಿಎಸ್‌ಐ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Related Articles

Back to top button