Belagavi NewsBelgaum NewsKannada NewsKarnataka News

*ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಹಲವೆಡೆ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿ ಕಳ್ಳರಿಂದ ಸುಮಾರು 7 ಲಕ್ಷ ಮೌಲ್ಯದ ವಸ್ತುಗಳು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿಯ ನ್ಯೂ ಗಾಂಧಿ ನಗರದ ಪರ್ವೆಜ ಜಮೀರ ಪಾರಿಶವಾಡಿ (25) ಹಾಗೂ ಫರ್ಹಾನ ರಿಯಾಜ ಅಹ್ಮದ ದಲಾಯತ (22) ಬಂಧಿತರು.

ಮಹಾಂತೇಶ ನಗರ, ಅಮನ ನಗರ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮನೆಗಳ್ಳತನ ನಡೆದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿ 2.5ಲಕ್ಷ ಮೌಲ್ಯದ ಚಿನ್ನಾಭರಣ, 50 ಸಾವಿರ ಮೌಲ್ಯದ ಬೆಳ್ಳಿಯ ಆಭರಣ, 80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಹಾಗೂ 2.20ಲಕ್ಷ ನಗದು ಸೇರಿದಂತೆ ಒಟ್ಟು 7 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.  ಅಲ್ಲದೇ ಬಂಧಿತರು ಜಬರಿ ಕಳ್ಳತನ ಪ್ರಕರಣದಲ್ಲಿ ಭಾಗವಹಿಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button