Belagavi NewsBelgaum NewsKannada NewsKarnataka News
*ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: 900 ಬಾಕ್ಸ್ ಅಕ್ರಮ ಮದ್ಯ ವಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಬೃಹತ್ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರ ಚುನಾವಣೆಗೆ ತೆಗೆದುಕೊಂಡು ಹೋಗುತ್ತಿದ್ದ ಗೋವಾ ಸಾರಾಯಿ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾಳಮಾರುತಿ ಪೊಲೀಸರು ಅಕ್ರಮವಾಗಿ ಗೋವಾ ಸಾರಾಯಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ವಶಕ್ಕೆ ಪಡೆದು ಚಾಲಕನನ್ನು ಅರೆಸ್ಟ್ ಮಾಡಿದ್ದಾರೆ.
ದಾಖಲಾತಿ ಇಲ್ಲದೇ ಸಾರಾಯಿ ಸಾಗಾಟ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ 900 ಬಾಕ್ಸ್ , 7 ಸಾವಿರ ಲೀಟರ್, 25 ರಿಂದ 30 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.
ಗೋವಾ ಮದ್ಯ ಎಲ್ಲಿಂದ ಬಂದಿದೆ ಎಲ್ಲಿಗೆ ಹೋಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಮಾಹಿತಿ ಇದೆ ಎಂದು ನಗರ ಪೊಲೀಸ್ ಆಯುಕ್ತ ಭೂಣಷ ಬೋರಸೆ ತಿಳಿಸಿದ್ದಾರೆ.

