Belagavi NewsBelgaum NewsCrimeKannada NewsKarnataka NewsNationalPolitics

*ರೌಡಿಶೀಟರ್‌ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರದ ರೌಡಿ ಸ್ಕ್ವಾಡ್ ಅಭಿಯಾನದ ಭಾಗವಾಗಿ ಬೈಲಹೊಂಗಲ ಪೊಲೀಸರು ಈ ವಿಶೇಷ ಕಾರ್ಯಾಚರಣೆ ನಡೆಸಿದರು.

ಬೈಲಹೊಂಗಲ ನಗರದ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ರೌಡಿಶೀಟರ್‌ಗಳ ಮನೆಗಳಿಗೆ ಪೊಲೀಸರು ತೆರಳಿ, ಅವರ ಪ್ರಸ್ತುತ ಚಟುವಟಿಕೆಗಳು, ಓಡಾಟ ಹಾಗೂ ಅಪರಾಧ ಹಿನ್ನೆಲೆಯ ಕುರಿತು ಮಾಹಿತಿ ಕಲೆಹಾಕಿದರು.

ಸಿಪಿಐ ಪ್ರಮೋದ ಯಲಿಗಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ರೌಡಿಶೀಟರ್‌ಗಳ ಚಲನವಲನಗಳ ಮೇಲೆ ನಿಗಾ ವಹಿಸಿ, ಯಾವುದೇ ರೀತಿಯ ಅಕ್ರಮ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button