Belagavi NewsBelgaum NewsElection NewsKannada NewsKarnataka News

ಬೆಳಗಾವಿ ಪೊಲೀಸರ ಕಾರ್ಯಾಚರಣೆ: 890 ಲೀಟರ್ ಮದ್ಯ ಸೀಜ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆ ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಇರುವಂತೆ ಬೆಳಗಾವಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.‌ ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ಮೌಲ್ಯದ ಮದ್ಯ ಸೀಜ್ ಮಾಡಿದ್ದಾರೆ.‌

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊಳಿಹೊಸೂರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಿ ಇಟ್ಟಿರುವ ಖಚಿತ ಮಾಹಿತಿ ಮೇರೆಗೆ ಕಿತ್ತೂರ ಹಾಗೂ ಬೈಲಹೊಂಗಲ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡಿ ಲಕ್ಷಾಂತರ ರೂ ಮೌಲ್ಯದ 890 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Home add -Advt

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾನಪ್ಪ ಗಂಗಪ್ಪ ಗೋರಕೊಳ್ಳ ಹಾಗೂ ರುದ್ರಪ್ಪ ಭೀಮಪ್ಪ ತೊರಗಲ್ಲ ಎಂಬುವರನ್ನು ಬಂಧಿಸಿ, ಒಟ್ಟು 4,01,372 ರೂ ಮೌಲ್ಯದ  90 ಎಂಎಲ್ ನ 99 ಬಾಕ್ಸ್  ಮದ್ಯ ವಶಕ್ಕೆ ಪಡೆಯಲಾಗಿದೆ.‌

Related Articles

Back to top button