
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಗರೀಕರಲ್ಲಿ ಶಾಂತಿ, ಫಿಟ್ನೆಸ್ ಹಾಗೂ ಐಕ್ಯತೆ ಉತ್ತೇಜಿಸುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಪೊಲೀಸ್ ಇಲಾಖೆ ಆಶ್ರಯದಲ್ಲಿ ರನ್ ಫಾರ್ ಪೀಸ್ ಮ್ಯಾರಥಾನ್ ಆಯೋಜಿಸಲಾಗಿತ್ತು.
ನಗರ ಮತ್ತು ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಬೆಳಗಾವಿ ನಗರದಲ್ಲಿ 5ಕೀಮಿ ಮತ್ತು 15ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯಲ್ಲಿ 6 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಿದ್ದರು. ಮ್ಯಾರಥಾನ್ ನಲ್ಲಿ ಸರ್ಕಾರಿ ಕಚೇರಿ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಕ್ರೀಡಾಪಟುಗಳು, ವೈದ್ಯರು,ಪೊಲೀಸರು ಭಾಗಿಯಾಗಿದ್ದರು.
ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋಡ್, ಎಸ್ಪಿ ಡಾ. ಭೀಮಾಶಂಕರ ಗುಳೇದ, ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಭಾಗಿ ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ